ನಟಿ ಸುಧಾರಾಣಿಗೆ ಇಂತಹ ಪರಿಸ್ಥಿತಿಯಾದರೇ ಇನ್ನೂ ಜನ ಸಾಮಾನ್ಯರ ಸ್ಥಿತಿ ಏನು? ಸರ್ಕಾರವೇ ಉತ್ತರಿಸಬೇಕು.?

ಸುದ್ದಿ

ಸುಧಾರಾಣಿಯವರ ಸಹೋದರನ ಪುತ್ರಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದು ಇದ್ದಕ್ಕಿದಂತೆ ತಡರಾತ್ರಿ ಆಕೆ ತಲೆ ಸುತ್ತಿ ಬಿದ್ದಿದ್ದಾರೆ. ತಕ್ಷಣ ಸುಧಾರಾಣಿ ಆಕೆಯನ್ನು ಅಂಬುಲೇನ್ಸ್ ನಲ್ಲಿ ಶೇಷಾದ್ರಿ ಪುರಂ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.’

ಆದರೆ ಆಸ್ಪತ್ರೆ ಸಿಬ್ಬಂದಿಗಳು ಸುಮಾರು 1 ಗಂಟೆಗಳ ಕಾಲ ಕಾಯಿಸಿದ್ದಾರೆ. ನಂತರ ನಮ್ಮಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಎಂದು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎನ್ನಲಾಗಿದೆ.

ಇಂತಹ ವ್ಯಕ್ತಿಗಳಿಗೆ ಹೀಗಾದರೇ ಇನ್ನು ಸಾಮಾನ್ಯರಿಗೆ ಎಂತಹ ಪರಿಸ್ಥಿತಿ ಬರಬಹುದು ಎಂದು ನಮ್ಮೆಲ್ಲರ ಪ್ರಶ್ನೆಯಾಗಿದೆ. ಕೂಡಲೇ ಸರ್ಕಾರ ಇಂತಹ ಬೇಜವಾಬ್ದಾರಿ ತನದಿಂದ ವರ್ತಿಸುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಳ್ಳಿ

ಇದಕ್ಕೆ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್ ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆಸಿಗದೇ ಪರದಾಡಬಾರದು . ಆ ಖಾಸಗಿ ಆಸ್ಪತ್ರೆಯ ವಿರುದ್ದ ಶಿಸ್ತು ಕ್ರಮ ವಹಿಸಲಾಗುವುದು ಎಂದಿದ್ದಾರೆ.

 

Leave a Reply

Your email address will not be published. Required fields are marked *