ಬಿಜೆಪಿ ಸರ್ಕಾರ 1 ವರ್ಷ ಪೂರೈಸಿದ ಹಿನ್ನೆಲೆ ಚಿತ್ರದುರ್ಗ, ದಾವಣಗೆರೆಗೆ ಭರ್ಜರಿ ಗಿಫ್ಟ್ ನೀಡಿದ ಬಿ.ಎಸ್.ವೈ

ಸುದ್ದಿ
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುಮಾರು ತಿಂಗಳಿನಿಂದ ಖಾಲಿ ಇದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 24 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತುಸು ಭಿನ್ನಮತವನ್ನ ದೂರ ಮಾಡಿದ್ದಾರೆ.

 

ಚಿತ್ರದುರ್ಗ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿಯವರಿಗೆ ಡಿ. ದೇವರಾಜು ಅರಸು  ಹಿಂದುಳಿದ ವರ್ಗಗಳ ಅಭಿವೃದ್ದಿ ನಿಮಗ ಮಂಡಳಿ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ ಮಂಡಳಿ ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರವರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮತ್ತು ಜಗಳೂರು ಶಾಸಕ ಎಸ್.ವಿ ರಾಮಚಂದ್ರಪ್ಪ ಅವರಿಗೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿ ಸಿ.ಎಂ ಬಿ.ಎಸ್,ವೈ ಆದೇಶ ಹೊರಡಿಸಿದ್ದಾರೆ.

 

Leave a Reply

Your email address will not be published. Required fields are marked *