ಮುನಿರತ್ನವರಿಗೆ ಶುಭಕೋರಿದ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರಬುದ್ದತೆಯ ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಸುದ್ದಿ
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಮುನಿರತ್ನರರಿಗೆ  ಜನ್ಮ ದಿನದ ಶುಭಾಶಯಗಳನ್ನು ನಿಖಿಲ್ ಕುಮಾರ್ ಸ್ವಾಮಿ ತಿಳಿಸಿದ್ದರು. ಇದು ಜೆ.ಡಿಎಸ್. ಕಟ್ಟಾ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದರು.
ಸೃಜನಸೀಲ ನಿರ್ಮಾಪಕರು ಮತ್ತು ಆತ್ಮೀಯರು ಆದ ಮುನಿರತ್ನರವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಈ ಪೋಸ್ಟ್ ಗೆ ಜೆ.ಡಿ.ಎಸ್ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಬೀಳಲು ಮುನಿರತ್ನ ಅವರು ಒಬ್ಬರು ಕಾರಣರು ಹೀಗಾಗಿ ಶುಭಾಶಯ ತಿಳಿಸಿದ್ದಕ್ಕೆ ಜೆಡಿಎಸ್ ಅಭಿಮಾನಿಗಳು ಸಿಟ್ಟಾಗಿದ್ದರು.
 ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. ‘ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ. ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ.
ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ.
ಮುನಿರತ್ನ ರಾಜಕೀಯವಾಗಿ ಕುಮಾರಸ್ವಾಮಿ ಅವರಿಗೆ ಏನೇ ಮಾಡಿರಬಹುದು. ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ. ಅದರಲ್ಲಿ ಎರಡು ಮಾತಿಲ್ಲ. ಕಾರ್ಯಕರ್ತನಾಗಿ, ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ ಎಂದು ಪ್ರಬುದ್ದತೆಯ ಸ್ಪಷ್ಟನೆಯನ್ನು ನಿಖಿಲ್ ನೀಡಿದ್ದಾರೆ.

Leave a Reply

Your email address will not be published. Required fields are marked *