ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುಮಾರು ತಿಂಗಳಿನಿಂದ ಖಾಲಿ ಇದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 24 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತುಸು ಭಿನ್ನಮತವನ್ನ ದೂರ ಮಾಡಿದ್ದಾರೆ.
ಯಾರಿಗೆ ಯಾವ ಸ್ಥಾನ..?
ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ: ಕರ್ನಾಟಕ ರಾಜ್ಯ ಗೃಹ ಮಂಡಳಿ ಬೆಂಗಳೂರು
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ ಮಂಡಳಿ
ಶೋನಾಪುರ ಶಾಸಕ ನರಸಿಂಹ ನಾಯಕ್ (ರಾಜುಗೌಡ)ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ :ಕರ್ನಾಟಕ ಮಾರುಕಟ್ಟೆ ಕನ್ಸಲ್ವೆಂಟ್ ಮತ್ತು ಏಜನ್ಸಿಸ್ ಲಿಮಿಟೆಡ್
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ
ದೇವದುರ್ಗ ಶಾಸಕ ಶಿವನಗೌಡ ನಾಯಕ್ : ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ
ರೋಣ ಶಾಸಕ ಕಳಕಪ್ಪ ಗುರುಶಾಂತಪ್ಪ ಬಂಡಿ: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ದಿ ನಿಗಮ ನಿಯಮಿತ
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ: ಕರ್ನಾಟ ಕರಾಜ್ಯ ಹಣಕಾಸು ಸಂಸ್ಥೆ
ತೆರದಾಳ್ ಶಾಸಕ ಸಿದ್ದು ಸವದಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ
ಜಗಳೂರು ಶಾಸಕ ಎಸ್.ವಿ ರಾಮಚಂದ್ರಪ್ಪ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮ ಮಂಡಳಿ
ಒಟ್ಟು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿ ಸಿ.ಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ